
ಹನೂರು :- ಪಟ್ಟಣದ ಹೊರವಲಯದಲ್ಲಿರುವ ಅಗ್ನಿಶಾಮಕ ಠಾಣೆಗೆ ಬೇಟಿ ನೀಡಿ ಅಳತೆಯನ್ನು ಪರಿಶೀಲನೆ ನಡೆಸಿ ಇದೇ ಮಾದರಿಯಲ್ಲಿ ಮಲೈ ಮಹದೇಶ್ವರ ಬೆಟ್ಟದಲ್ಲಿ ನೂತನ ಅಗ್ನಿಶಾಮಕ ಠಾಣೆ ನಿರ್ಮಾಣ ಮಾಡುವ ಸಂಬಂಧ ಹನೂರು ಅಗ್ನಿಶಾಮಕ ಠಾಣೆಗೆ ಭೇಟಿ ನೀಡಿ ಅಧಿಕಾರಿಗಳಿಂದ ಶಾಸಕ ಮಂಜುನಾಥ್ ರವರು ಮಾಹಿತಿಯನ್ನು ಪಡೆದುಕೊಂಡರು. ಠಾಣೆಯಲ್ಲಿ 500 ಲೀಟರ್ ನೀರಿನ ಸಾಮರ್ಥ್ಯ ಹೊಂದಿರುವಂತಹ ಲಘು ವಾಹನವಿದ್ದು ಇದನ್ನು ಸುಮಾರು 4500ಸಾವಿರ ಲೀಟರ್ ನೀರಿನ ಸಾಮರ್ಥ್ಯ ಇರುವಂತಹ ವಾಹನಕ್ಕೆ ಬೆಡಿಕೆಯಿಟ್ಟ ರು ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು ಗೃಹ ಮಂತ್ರಿಗಳ ಕಚೇರಿಗೆ ದೂರವಾಣಿ ಕರೆ ಮಾಡಿ ಶೀಘ್ರದಲ್ಲಿ ಇದನ್ನು ಬಗೆಹರಿಸಲು ಕ್ರಮ ಕೈಗೊಳ್ಳಲುವಂತೆ ಮನವಿ ಮಾಡಿದರು….ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಸಂದೀಪ್ ಬಸರಗಿ,ಪ್ರಭಾರ ಅಗ್ನಿಶಾಮಕ ಠಾಣಾಧಿಕಾರಿ ಮಹೇಶ್,ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು..
