ಬಿತ್ತನೆ ಅಭಿಯಾನಕ್ಕೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಚಾಲನೆ.

ಬಿತ್ತನೆ ಅಭಿಯಾನಕ್ಕೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಚಾಲನೆ.

ಹನೂರು :- ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿಹಾಗೂ ಕೃಷಿ ಇಲಾಖೆ ವತಿಯಿಂದ ಹನೂರು ತಾಲೂಕಿನ ಚಿಂಚಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಬಿತ್ತನೆ ಅಭಿಯಾನಕ್ಕೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಗುರುವಾರ ಚಾಲನೆ ನೀಡಿದರು. ಪ್ರಗತಿಪರ ರೈತ ದಯಾನಂದ್ ಅವರ ಚಿಂಚಳ್ಳಿ ಗ್ರಾಮದಜಮೀನಿನಲ್ಲಿ ರಾಗಿ ಬಿತ್ತನೆ ಮಾಡುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಅವರೊಂದಿಗೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಬಿತ್ತನೆಅಭಿಯಾನಕ್ಕೆ ಚಾಲನೆ ಕೊಟ್ಟರು. ಇದೇ ವೇಳೆ ಡ್ರೋನ್ ಮೂಲಕ ಬೆಳೆಗೆಳಿಗೆ ಔಷಧಿ ಸಿಂಪಡಣೆ ಕಾರ್ಯವನ್ನು ಸಚಿವರು ನೆರವೇರಿಸಿದರು.ಬಳಿಕ ಜಮೀನಿನ ಆವರಣದೊಳಗೆ ಕೃಷಿ ಇಲಾಖೆವತಿಯಿಂದ ಫಲಾನುಭವಿಗಳಿಗೆ ಪವರ್ ಟಿಲ್ಲರ್, ರೋಟೊವೇಟರ್, ಜಾಫ್ ಕಟರ್, ಪವರ್ ವೀಡರ್, ಎಣ್ಣೆ ಗಾಣ, ಇನ್ನಿತರ ಕೃಷಿ ಸಂಬಂಧಿ ಯಂತ್ರೋಪಕರಣಗಳನ್ನು ಸಚಿವ ಎನ್ ಚಲುವರಾಯಸ್ವಾಮಿ ಹಾಗೂ ವೆಂಕಟೇಶ್,ಶಾಸಕ ಎಂ.ಆರ್. ಮಂಜುನಾಥ್ ವಿತರಿಸಿದರು.ತದನಂತರ ವೇದಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಚಿವ ಚಲುವರಾಯಸ್ವಾಮಿ, ಸಮಗ್ರ ಕೃಷಿಯಿಂದ ಹೆಚ್ಚಿನ ಆದಾಯ ಬರಲಿದೆ. ಒಂದು ಎಕರೆಜಮೀನಿನಲ್ಲಿ ತರಕಾರಿ, ಕೃಷಿಹೊಂಡ, ಮೀನು, ಕುರಿ, ಕೋಳಿ ಸಾಕಾಣೆಯಂತಹ ಈ ಎಲ್ಲಾ ಚಟುವಟಿಕೆಗಳನ್ನು ಅಳವಡಿಸಿಕೊಂಡರೆ ಕನಿಷ್ಠ 10 ಲಕ್ಷ ರೂ. ಆದಾಯ ಪಡೆಯಬಹುದಾಗಿದೆ. ಇಂತಹ ಸಮಗ್ರ ಕೃಷಿಯಿಂದ ಹಲವರು ಆರ್ಥಿಕವಾಗಿ ಸದೃಢರಾಗಿರುವ ನಿದರ್ಶನಗಳಿವೆಎಂದರು. ರಾಸಾಯನಿಕ ಗೊಬ್ಬರಗಳಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿರುವುದರಿಂದ ಇದರ ಅವಲಂಬನೆಕಡಿಮೆಯಾಗಬೇಕಿದೆ. ಸಾವಯವ ನೈಸರ್ಗಿಕ ಕೃಷಿ ಪದ್ಧತಿಗೆ ಹೆಚ್ಚಿನ ಒಲವು ತೋರಬೇಕು. ಸರ್ಕಾರವು ಇದರ ಉತ್ತೇಜನಕ್ಕೆ ಮುಂದಾಗಿದೆ. ನೀರು ವ್ಯರ್ಥ ಮಾಡದೇ ಅಗತ್ಯ ಪ್ರಮಾಣದಲ್ಲಿ ಬಳಸಿದಾಗ ಭೂಮಿಯ ಫಲವತ್ತತೆಯುಹೆಚ್ಚಾಗಲಿದೆ. ಸೂಕ್ಷ್ಮ ನೀರಾವರಿ ಅಳವಡಿಕೆಗೆ ಹೆಚ್ಚಿನ ಸಹಾಯಧನ ನೀಡಲಾಗುತ್ತಿದೆ ಎಂದು ತಿಳಿಸಿದರು.

Related Articles

Leave a Reply

Your email address will not be published. Required fields are marked *