
ಹನೂರು :-ತಾಲೂಕಿನ ಮಲೆಮಹದೇಶ್ವರ ವನ್ಯಧಾಮ ವ್ಯಾಪ್ತಿಯ ಪಾಲಾರ್ ಅರಣ್ಯ ಪ್ರದೇಶದ ದೊಡ್ಡಹಳ್ಳ ಗಸ್ತು ಬಳಿ ಸುಮಾರು 35 ವರ್ಷ ವಯಸ್ಸಿನ ಹೆಣ್ಣಾನೆಯೊಂದು ದಿಢೀರ್ ಸಾವನ್ನಪ್ಪಿರುವ ಘಟನೆ ಬುಧವಾರ ಬೆಳಕಿಗೆ ಬಂದಿದೆ.
ಆನೆಯು ಸ್ವಾಭಾವಿಕ ಕಾರಣಗಳಿಂದಲೇ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದ್ದು, ಈ ಕುರಿತು ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ. ಘಟನೆ ಸಂಬಂಧ ಮಾಹಿತಿ ತಿಳಿದ ತಕ್ಷಣ ಎಸಿಎಫ್ ಸ್ಟೇಪ್ಟಿನ್ಸ್, ಆರ್‌ಎಫ್‌ಒ ಉಮಾಪತಿ, ಹಾಗೂ ವೈದ್ಯ ಡಾ. ಆದರ್ಶ ಅವರ ಸಮ್ಮುಖದಲ್ಲಿ ಸ್ಥಳದಲ್ಲಿಯೇ ಮರಣೋತ್ತರ ಪರೀಕ್ಷೆ ನಡೆಸಲಾಯಿತು.
