
ಹನೂರು :- ತಾಲೂಕಿನ ಪ್ರಸಿದ್ಧ ಧಾರ್ಮಿಕ ಪುಣ್ಯಕ್ಷೇತ್ರ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಹಣ ಎಣಿಕೆ ಕಾರ್ಯ ನಡೆದಿದ್ದು 30 ದಿನಗಳಲ್ಲಿ 2 ಕೋಟಿ.36ಲಕ್ಷ.73 ಸಾವಿರ ರೂ ಸಂಗ್ರಹವಾಗಿದೆ.ಶ್ರೀ ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಲ್ಲಿ ಈ ದಿನ ಬೆಳಿಗ್ಗೆ 7-00 ಗಂಟೆಯಿಂದ ಶ್ರೀ ಶ್ರೀ ಶಾಂತಮಲ್ಲಿಕಾರ್ಜುನಸ್ವಾಮಿಗಳು, ಶ್ರೀ ಸಾಲೂರು ಬೃಹನ್ಮಠಾಧ್ಯಕ್ಷರು ರವರ ದಿವ್ಯಸಾನಿದ್ಯದ ನೇತೃತ್ವದಲ್ಲಿ ಹುಂಡಿ ಎಣಿಕೆ ಪ್ರಾರಂಭವಾಯಿತು. ದಿನಾಂಕ : 18/06/2025 ರಿಂದ 17/09/2025 ರವರೆಗಿನ 30 ದಿನಗಳಲ್ಲಿ ಒಟ್ಟು ಮೊತ್ತ ರೂ.2,36,73,185.00ಗಳು (ಹುಂಡಿ ಮತ್ತು ಇ-ಹುಂಡಿ ಸೇರಿ) ಹಾಗೂ ಚಿನ್ನ 70 ಗ್ರಾಂ, ಬೆಳ್ಳಿ 01 ಕೆ.ಜಿ 712 ಗ್ರಾಂ ಹುಂಡಿಯಲ್ಲಿ ದೊರೆತಿದೆ. ಹಾಗೂ ವಿದೇಶಿ ನೋಟುಗಳು 20, ಚಲಾವಣೆಯಾಗದ 2000 ಮುಖಬೆಲೆಯ 14 ನೋಟುಗಳು ಹುಂಡಿಯಲ್ಲಿ ದೊರೆತಿದೆ.ಎಣಿಕೆ ಕಾರ್ಯದಲ್ಲಿ ಪ್ರಾಧಿಕಾರ ಕಾರ್ಯದರ್ಶಿ ರಘು, ಪ್ರಾಧಿಕಾರದ ನಾಮನಿರ್ದೇಶಿತ ಸದಸ್ಯರುಗಳಾದ ಮರಿಸ್ವಾಮಿ, ಕಾಗಲವಾಡಿ, ಭಾಗ್ಯಮ್ಮ, ಕುಪ್ಯಾ, ವರುಣಾ, ಪ್ರಾಧಿಕಾರದ ಹಣಕಾಸು ಮತ್ತು ಲೆಕ್ಕ ಪತ್ರ ಸಲಹೆಗಾರ ಮಹದೇವು.ಸಿ, ಉಪ ಕಾರ್ಯದರ್ಶಿ ಚಂದ್ರಶೇಖರ. ಜಿ.ಎಲ್, ಲೆಕ್ಕಧೀಕ್ಷಕ ಗುರುಮಲ್ಲಯ್ಯ ಹಾಗೂ ಚಾಮರಾಜನಗರ ಜಿಲ್ಲಾಡಳಿತ ಕಛೇರಿಯ ಶ್ವೇತ, ಪ್ರ.ದ.ಸ ಹಾಗೂ ಪ್ರಾಧಿಕಾರದ ಸಿಬ್ಬಂದಿಗಳು, ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಕೊಳ್ಳೇಗಾಲದ ಬ್ಯಾಂಕ್ ಆಪ್ ಬರೋಡ ಮುಖ್ಯ ವ್ಯವಸ್ಥಾಪಕರು, ಸಿಬ್ಬಂದಿಗಳು ಹಾಜರಿದ್ದರು.
