
ಹನೂರು :- ವಿಧಾನಸಭಾ ಕ್ಷೇತ್ರದ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬರುವಂತ ಹಾಲೇರಿ ಕೆರೆ ಹಾಗೂ ಕಿರಪತಿ ಡ್ಯಾಮ್ ಹಾಗೂ ಪಾನಕೋಬೆ ಕೆರೆ ನಾಲ್ ರೋಡ್ ಬಳಿ ಬರುವ ಚೆಕ್ಂ ವಿವಿಧಡೆ ಕೆರೆಗಳನ್ನು ಶಾಸಕ ಎಂ.ಆರ್ ಮಂಜುನಾಥ್ ಅಧಿಕಾರಿಗಳ ಜೊತೆ ತೆರಳಿ ಪರಿಶೀಲನೆ ನಡೆಸಿ ಕೆರೆಗಳ ಅಭಿವೃದ್ಧಿಯನ್ನು ಕೈಗೊಳ್ಳುವ ನಿಟ್ಟಿನಲ್ಲಿ ನೀರಾವರಿ ಯೋಜನೆಗಳ ಅನುಷ್ಠಾನ ಗೊಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು…
ನೀರಿಗೆ ಆಹಾಕಾರ ಶಾಸಕರ ಭೇಟಿ : ಅರಣ್ಯದಂಚಿನ ವಿವಿಧ ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೂರಿರುವ ಹಿನ್ನೆಲೆಯಲ್ಲಿ ಮಾನವ ಪ್ರಾಣಿ ಸಂಘರ್ಷ ಜೊತೆಗೆ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ತಾಲೂಕಿನ ವಿವಿಧ ಗ್ರಾಮಗಳ ಕೆರೆಗಳನ್ನು ಪರಿಶೀಲನೆ ನಡೆಸಿ ಹೆಚ್ಚಿನ ರೀತಿಯಲ್ಲಿ ಅರಣ್ಯ ಇಲಾಖೆ ವತಿಯಿಂದ ತಮ್ಮ ವ್ಯಾಪ್ತಿಯಲ್ಲಿ ಬರುವ ಕೆರೆಗಳನ್ನು ಅಭಿವೃದ್ಧಿಪಡಿಸಲು ನೀರಿನ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಅಧಿಕಾರಿಗಳು ಮುಂದಾಗಬೇಕು ಎಲ್ಲಾ ರೀತಿಯಲ್ಲೂ ಸಹಕಾರ ನೀಡುವುದಾಗಿ ಇದೆ ವೇಳೆಯಲ್ಲಿ ತಿಳಿಸಿದರು…
ಹುಲಿ ಅರಣ್ಯ ಪ್ರದೇಶ ಘೋಷಣೆ ಬೇಡ ಗ್ರಾಮಸ್ಥರ ಒತ್ತಾಯ : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಲಯವನ್ನು ಹುಲಿ ಸಂರಕ್ಷಿತ ಅರಣ್ಯ ಪ್ರದೇಶವನ್ನಾಗಿ ಘೋಷಣೆ ಮಾಡುವ ಮುನ್ನ ಅರಣ್ಯದಂಚಿನ ಗ್ರಾಮಗಳಲ್ಲಿ ವಾಸಿಸುತ್ತಿರುವ ಜನರ ಮತ್ತು ರೈತರ ಸಂರಕ್ಷಣೆ ಹಾಗೂ ಮಾನವ ಪ್ರಾಣಿ ಸಂಘರ್ಷ ತಪ್ಪಿಸಲು ಬೇಕಾದ ಸಕಲ ರೀತಿಯಲ್ಲಿಯೂ ಸಿದ್ಧತೆಗಳು ಮಾಡಿಕೊಳ್ಳುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಹೇಳಿದರು..ಪ್ರತಿಕ್ರಿಯೆ : ಸ್ಥಳದಲ್ಲಿದ್ದ ಚಾಮರಾಜನಗರ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಿರಾಲಾಲ್ ಮಾತನಾಡಿ ಉನ್ನತ ಮಟ್ಟದ ಅಧಿಕಾರಿಗಳ ಜೊತೆ ಸಭೆ ನಡೆಸಿ ಗ್ರಾಮಸ್ಥರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು…
ಇದೇ ವೇಳೆಯಲ್ಲಿ ಡಿಸಿಎಫ್ ಭಾಸ್ಕರ್, ಸಾಮಾಜಿಕ ಅರಣ್ಯ ಅಧಿಕಾರಿ ಪ್ರಫುಲ್ಲ, ವಲಯ ಅರಣ್ಯಾಧಿಕಾರಿ ರಾಜಶೇಖರ್ ಮೂರ್ತಿ, ಸಣ್ಣ ನೀರಾವರಿ ಇಲಾಖೆ ಎಇಇ ಅಭಿಲಾಶ್, ಕಾವೇರಿ ನೀರಾವರಿ ಅವರು ಎ ಇ ಇ ಕರುಣಮಯಿ,ಲೋಕೋಪಯೋಗಿ ಇಲಾಖೆ ಎ ಇ ಇ ಚಿನ್ನಣ್ಣ, ಕಾರ್ಯನಿರ್ವಹಣಾಧಿಕಾರಿ ಉಮೇಶ್, ರಾಮಪುರ ರಾಜಸ್ವ ನಿರೀಕ್ಷಕ ಶಿವಕುಮಾರ್ ,ಇನ್ನಿತರ ಅಧಿಕಾರಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು……
