
ಹನೂರು :- ತಾಲೂಕಿನ ಕೌದಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆಕಾಶ್ ರವರ ಮೇಲಿನ ಆರೋಪದ ವರದಿ ಸಲ್ಲಿಸಿ 20 ದಿನ ಕಳೆದರೂ ಯಾವುದೇ ಕ್ರಮ ಕೈಗೊಳ್ಳದೆ ಇರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
ಹನೂರು ತಾಲೂಕಿನ ಕೌದಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಆಕಾಶ್ ರವರು ಕರ್ತವ್ಯ ಲೋಪ ಹಾಗೂ ಕೇಂದ್ರ ಸರ್ಕಾರದ ಯೋಜನೆಯಲ್ಲಿ ನಿಯಮಾನುಸಾರ ಅನುಷ್ಠಾನಗೊಳಿಸುವಲ್ಲಿ ನಿರ್ಲಕ್ಷ್ಯತನ ವಹಿಸಿರುವ ಕುರಿತು ಕರ್ನಾಟಕ ನಾಗರಿಕ ಸೇವೆ ನಿಯಮಗಳು 1957ರ ಅನ್ವಯ ಇಲಾಖೆ ವಿಚಾರಣೆ ಕೈಗೊಳ್ಳಲು ಅನುಬಂಧ ಒಂದರಿಂದ ನಾಲ್ಕು ದಾಖಲಾತಿಗಳೊಂದಿಗೆ ಜಿಲ್ಲಾ ಪಂಚಾಯಿತಿ ಸಿಇಓ ರವರಿಗೆ ಕರ್ನಾಟಕ ನಾಗರಿಕ ಸೇವಾ ನಿಯಮಗಳ ಅನ್ವಯ ಸೂಕ್ತ ಶಿಸ್ತು ಕ್ರಮ ಜರುಗಿಸಲು ಹನೂರು ತಾಲೂಕಿನ ಇಒ ಉಮೇಶ್ ರವರು ಜುಲೈ 2 ರಂದು ಶಿಫಾರಸ್ಸು ಮಾಡಿದ್ದಾರೆ. ಆದರೆ ಶಿಫಾರಸ್ಸು ಮಾಡಿ 20 ದಿನ ಕಳೆದರೂ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ, ಇದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
ಇನ್ನು ಮುಂದಾದರೂ ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತುಪಡಿಸಿ ನಿಷ್ಠಾವಂತ ಅಧಿಕಾರಿಗಳನ್ನು ನೇಮಕ ಮಾಡುವಂತೆ ಪ್ರಜ್ಞಾವಂತ ನಾಗರಿಕರು ಮನವಿ ಮಾಡಿದ್ದಾರೆ.
ಕೌದಳ್ಳಿ ಪಿಡಿಒ ಆಕಾಶ್ ರವರು ತಮ್ಮ ಕರ್ತವ್ಯವನ್ನು ಸಮರ್ಪಕವಾಗಿ ನಿರ್ವಹಿಸುತ್ತಿಲ್ಲ ಎಂಬುವುದರ ಬಗ್ಗೆ ಹಲವಾರು ದೂರುಗಳು ಬಂದಿದೆ. ವರದಿ ಪಡೆದುಕೊಂಡು ಅವರ ಮೇಲೆ ಸೂಕ್ತ ಕ್ರಮ ವಹಿಸಲಾಗುವುದು. ಮೋನಾ ರೋತ ಸಿಇಒ ಚಾಮರಾಜನಗರ ಜಿ.ಪಂ
