
ಹನೂರು :-ತಾಲ್ಲೂಕಿನ ಹಳೇ ಮಾರ್ಟಳ್ಳಿ ಗ್ರಾಮದಲ್ಲಿ ಮಹಿಳೆಯೊಬ್ಬರಿಗೆ ಬೈಕ್ ಡಿಕ್ಕಿಯಾಗಿ ಮಹಿಳೆ ಸಾವನ್ನಪ್ಪಿರುವ ದುರಂತ ಸಂಭವಿಸಿದೆ.ರಾಮಪುರ ಪೊಲೀಸ್ ಠಾಣಾ ವ್ಯಾಪ್ತಿಗೆ ಸೇರಿದ ಹಳೇ ಮಾರ್ಟಳ್ಳಿ ಗ್ರಾಮದ ಮಾಜಿ ಸ್ಯೆನಿಕರಾದ ಕಸ್ಪಾರ್ ರವರ ಪುತ್ರಿ ಜೂಲಿ (40) ಎಂಬ ಮಹಿಳೆ, ಗ್ರಾಮದ ಚರ್ಚ್ ನಲ್ಲಿ ಸ್ವಾತಂತ್ರ್ಯ ದಿನಾಚಣೆ ಕಾರ್ಯಕ್ರಮ ಮುಗಿಸಿ ರಸ್ತೆ ಮೂಲಕ ನಡೆದುಕೊಂಡು ಮನೆಗೆ ತೆರಳುತ್ತಿದ್ದ ವೇಳೆ ಬೈಕ್‌ವೊಂದು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದರುತಕ್ಷಣವೇ ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ, ಅವರು ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಸುದ್ದಿ ತಿಳಿದ ರಾಮಾಪುರ ಪೊಲೀಸ್ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.
