
ಹನೂರು :- ತಾಲೂಕಿನ ತಾಳಬೆಟ್ಟದ ಸಮೀಪ ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರರಿಬ್ಬರು ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ಜರುಗಿದೆ.
ಬೆಂಗಳೂರು ನಿವಾಸಿ ಪ್ರದೀಪ್ (20) ನೆಲಮಂಗಲದ ಭಾವೀಶ್ (21) ಮೃತ ದುರ್ದೈವಿಗಳು.

ಮೃತಪಟ್ಟ ಯುವಕರು ಪಲ್ಸರ್ ಬೈಕ್ ನಲ್ಲಿ ಮಲೆ ಮಾದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದರು. ಈ ವೇಳೆ ತಾಳಬೆಟ್ಟದ ಬಳಿ ಮಲೆ ಮಾದೇಶ್ವರ ಬೆಟ್ಟದಿಂದ ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನ ಹಿಂಬದಿ ಕುಳಿತಿದ್ದ ಪ್ರದೀಪ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಉಳಿದಂತೆ ತೀವ್ರ ರಕ್ತಸ್ರಾವವಾಗಿದ್ದ ಭಾವೇಶ್ ಎಂಬತನನ್ನು ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಕರೆದೊಯ್ಯುತ್ತಿದ ವೇಳೆ ಮೃತಪಟ್ಟಿದ್ದಾನೆ.ಮೃತ ದೇಹಗಳನ್ನು ಕೊಳ್ಳೆಗಾಲ ಉಪ ವಿಭಾಗ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ. ಈ ಸಂಬಂಧ ರಾಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ಡಾ ಬಿ ಟಿ ಕವಿತಾ ಭೇಟಿ ನೀಡಿ ಪರಿಶೀಲಿಸಿದರು. ಇದೆ ವೇಳೆ ಇನ್ಸ್ಪೆಕ್ಟರ್ ಚಿಕ್ಕರಾಜಶೆಟ್ಟಿ, ಸಬ್ ಇನ್ಸ್ಪೆಕ್ಟರ್ ಈಶ್ವರ, ಹಾಗೂ ಸಿಬ್ಬಂದಿಗಳು ಹಾಜರಿದ್ದರು.
