
ಕೊಳ್ಳೇಗಾಲ :- ನಕ್ಷತ್ರ ಆಮೆಯನ್ನು ಸಾಗಣೆ ಮಾಡುತ್ತಿದ್ದ ಆರೋಪಿಯನ್ನು ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಗ್ರಾಮದ ಬೈಪಾಸ್ ರಸ್ತೆಯಲ್ಲಿ ಕೊಳ್ಳೇಗಾಲದ ಪಟ್ಟಣದ ಅರಣ್ಯ ಸಂಚಾರ ದಳದ ಪೊಲೀಸರು ಬಂಧಿಸಿ, ಆಮೆಯನ್ನು ರಕ್ಷಣೆ ಮಾಡಿದ್ದಾರೆ. ಹನೂರು ತಾಲೂಕಿನ ಪುದೂರು ಗ್ರಾಮದ ನಿವಾಸಿ ನಾಗರಾಜು(35) ಬಂಧಿತ ಆರೋಪಿ. ಈತ ಮಲೆ ಮಹದೇಶ್ವರ ಬೆಟ್ಟದಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ನಿರ್ವಹಿಸುತ್ತಿದ್ದನು. ಮಧುವನಹಳ್ಳಿ ಗ್ರಾಮದ ರಸ್ತೆಯಲ್ಲಿ ಬೆಂಗಳೂರು ಕಡೆಗೆ ಒಂದು ನಕ್ಷತ್ರ ಆಮೆಯನ್ನು ಸಾಗಣೆ ಮಾಡುತ್ತಿದ್ದಾನೆ ಎಂಬ ಖಚಿತ ಮಾಹಿತಿ ಮೇರೆಗೆ ಅರಣ್ಯ ಸಂಚಾರ ದಳದ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದರು.
