ಕಾರು ಮರಕ್ಕೆ ಡಿಕ್ಕಿ ನಾಲ್ವರಿಗೆ ಗಂಭೀರ ಪೆಟ್ಟು…!

ಹನೂರು :- ಮಲೆಮಹದೇಶ್ವರ ಬೆಟ್ಟ ಮಾರ್ಗದ ಮಲ್ಲಯ್ಯನಪುರ – ಕೆಂಚಯ್ಯನದೊಡ್ಡಿ ರಸ್ತೆಯಲ್ಲಿ ಸೋಮವಾರ ರಾತ್ರಿ ಚಾಲಕ ನಿಯಂತ್ರಣ ತಪ್ಪಿದ ಪರಿಣಾಮ ಕಾರು ಮರಕ್ಕೆ ಡಿಕ್ಕಿ ಹೊಡೆದಿದ್ದು, ನಾಲ್ವರು ಗಾಯಗೊಂಡಿದ್ದಾರೆ.

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಹೀರೆಮಾರಳ್ಳಿ ಗ್ರಾಮದ ಚಾಲಕ ಪ್ರದೀಪ್ ತನ್ನ ಸ್ನೇಹಿತರೊಡನೆ ತಡರಾತ್ರಿ ಕಾರಿನಲ್ಲಿ ಮ.ಬೆಟ್ಟಕ್ಕೆ ತೆರಳುತ್ತಿದ್ದರು. ಈ ವೇಳೆ ಮಲ್ಲಯ್ಯನಪುರದ ಬಳಿ ಚಾಲಕ ನಿಯಂತ್ರಣ ತಪ್ಪಿದ ಪರಿಣಾಮ ಕಾರು ಮತ್ತೋಂದು ಕಾರಿಗೆ ಡಿಕ್ಕಿ ಹೊಡೆದು ಮರಕ್ಕೆ ಅಪ್ಪಳಿಸಿದೆ. ಇದರಿಂದ ಕಾರಿನಲ್ಲಿ ಚಾಲಕ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ.

ಈ ಅಪಘಾತಕ್ಕೆ ಚಾಲಕನ ಮದ್ಯ ಸೇವನೆಯೇ ಕಾರಣ ಎಂಬುದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ರಾಮಾಪುರ ಪೊಲೀಸರು ಆಗಮಿಸಿ ಪರಿಶೀಲಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಕಳುಹಿಸಿ ಕೊಟ್ಟಿದ್ದಾರೆ. ಈ ಸಂಬಂಧ ರಾಮಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.

Related Articles

Leave a Reply

Your email address will not be published. Required fields are marked *