ಗಾಂಜಾ ಮಾರಾಟ, ಮಹಿಳೆ ಬಂಧನ…

ಹನೂರು :- ತಾಲೂಕಿನ ಮಲೆಮಹದೇಶ್ವರ ಬೆಟ್ಟ ಸಮೀಪದ ನಾಗಮಲೆಗೆ ತೆರಳುವ ರಸ್ತೆಯಲ್ಲಿ ಶುಕ್ರವಾರ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.ಮ.ಬೆಟ್ಟ ಸಮೀಪದ ಕೀರನಹೊಲ ಗ್ರಾಮದ ಭಾಗ್ಯ ಎಂಬುವರೇ ಬಂಧಿತ ಆರೋಪಿ. ಈಕೆ ಮನೆಯ ಮುಂಭಾಗದ ನಾಗಮಲೆಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಅಕ್ರಮವಾಗಿ, ಸಾರ್ವಜನಿಕರಿಗೆ ಒಕಿ ಗಾಂಜಾವನ್ನು ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಡಿವೈಎಸ್ಪಿ ಧರ್ಮೇಂದ್ರ ಅವರ ಮಾರ್ಗದರ್ಶನದಲ್ಲಿ ಇನ್‌ಪೆಕ್ಟರ್ ಜಗಧೀಶ್ ಹಾಗೂ ಸಿಬ್ಬಂದಿ ತಂಡ ದಾಳಿ ನಡೆಸಿ ಪರಿಶೀಲಿಸಿದಾಗ ಬ್ಯಾಗ್‌ನಲ್ಲಿ ಗಾಂಜಾ ಮಾರಾಟ ಮಾಡುತ್ತಿರುವುದು ದೃಢಪಟ್ಟಿದೆ. 230 ಗ್ರಾಂ ಒಕ ಗಾಂಜಾವನ್ನು ವಶಕ್ಕೆ ಪಡೆದ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ.

Related Articles

Leave a Reply

Your email address will not be published. Required fields are marked *